newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಟ ಕಿಚ್ಚ ಸುದೀಪ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ನಲಪಾಡ್ ಕೂಡ ಈ ಸಂದರ್ಭದಲ್ಲಿ ಜತೆಗಿದ್ದರು.
ಚುನಾವಣೆ ಹತ್ತಿರ ಬಂದಿರುವ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಸ್ಟಾರ್ ನಟನ ಮನೆಗೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.
ಮಲ್ಟಿಪ್ಲೆಕ್ಸ್ ನಿರ್ಮಾಣ ಸಂಬಂಧ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಅಧಿಕೃತ ಮಾಹಿತಿ ಹೊರ ಬಂದಿಲ್ಲ.
ಈ ಹಿಂದೆ ಸುದೀಪ್ ಮನೆಯಲ್ಲಿ ಹಲವು ಬಾರಿ ಊಟ ಮಾಡಿದ್ದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಉತ್ಸವದಲ್ಲಿ ಹೇಳಿದ್ದರು. ಸುದೀಪ್ ಅವರ ತಾಯಿ ಮಾಡಿದ ಅಡುಗೆ ಹಲವು ಬಾರಿ ಸೇವಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದರು.