ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕ ಮಾಡಲಾಗಿದೆ. ಡಾ.ರಾಜೇಂದ್ರ ಕೆ.ವಿ ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯಾಗಿ ಸಿಂಧೂ ರೂಪೇಶ್ ಅವರನ್ನು ಸರ್ಕಾರ ನಿಯೋಜಿಸಿದೆ. ಡಾ. ರಾಜೇಂದ್ರ ಕೆ.ವಿ ಅವರು 2013 ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ಮೂಲದ ರಾಜೇಂದ್ರ ವೈದ್ಯರು. ನಂತರ ಐಎಎಸ್ ಪರೀಕ್ಷೆ ಬರೆದ ಇವರು ದೇಶದಲ್ಲಿ 32 ನೇ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದರು. ಗೋ ಸಾಗಣೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ ಕೆಲ ಸಮಯದಲ್ಲೇ ಸಿಂಧೂ ರೂಪೇಶ್ ವರ್ಗಾವಣೆಗೊಂಡಿದ್ದಾರೆ. ಈ ಹೇಳಿಕೆ ನೀಡಿದ ಬಳಿಕ ಬಲಪಂಥೀಯ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಬೆಳಗಾವಿ ಜಿಲ್ಲಾ ಪಂಚಾಯಿತಿಗೆ ದರ್ಶನ್ ಎಚ್.ವಿ. ಸಿಇಒ ಆಗಿದ್ದಾರೆ. 2016 ಬ್ಯಾಚ್ ಅಧಿಕಾರಿ ದರ್ಶನ್ ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದಾರೆ.
ದಕ್ಷಿಣ ಕನ್ನಡ ಡಿಸಿ ಸಿಂಧೂ ವರ್ಗಾವಣೆ, ಡಾ.ರಾಜೇಂದ್ರ ಹೊಸ ಜಿಲ್ಲಾಧಿಕಾರಿ
Follow Us