ಬೆಂಗಳೂರು: ರಾಜ್ಯದಲ್ಲಿ ಮೇಯರ್ ಗಳು ಕೂಡ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ದಾವಣಗೆರೆ ಮೇಯರ್ ಅಜಯ ಕುಮಾರ್ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಅವರ ಪತ್ನಿ ಮತ್ತು ಪುತ್ರ ಕೂಡ ಸೋಂಕಿಗೆ ತುತ್ತಾಗಿದ್ದಾರೆ.
ಕೊರೋನಾ ಸೋಂಕು ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ.
ಈ ಮಧ್ಯೆ ಕ್ವಾರಂಟೈನ್ ಕೇಂದ್ರದಲ್ಲಿ ಸೂಕ್ತ ಸೌಲಭ್ಯ ನೀಡುತ್ತಿಲ್ಲ ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ಪ್ರತಿಭಟನೆ ಕೂಡ ನಡೆದಿದೆ. ಹಾಸ್ಟೆಲ್ ವೊಂದನ್ನು ಕ್ವಾರಂಟೈನ್ ಕೇಂದ್ರವಾಗಿ ಪರಿವರ್ತಿಸಿದ್ದು ಸೂಕ್ತ ಸೌಲಭ್ಯ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.