Thursday, December 9, 2021

ಉಡುಪಿ ಬಳಿ ಸತ್ತ ತಿಮಿಂಗಿಲ ಮೀನು ಪತ್ತೆ

Follow Us

ಉಡುಪಿ: ಭಾರೀ ಗಾತ್ರದ ತಿಮಿಂಗಿಲ ಮೀನೊಂದು ಪಶ್ಚಿಮ ಕರಾವಳಿ ತೀರಕ್ಕೆ ತೇಲಿಬಂದು ಮೃತಪಟ್ಟಿದೆ.
ಉಡುಪಿಯ ಕುತ್ಪಾಡಿ ಗ್ರಾಮದ ಪಡುಕೆರೆ ಕಡಲ ತೀರದಲ್ಲಿ ಪತ್ತೆಯಾದ ಈ ಭಾರೀ ಮೀನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ತೀರ ಪ್ರದೇಶಕ್ಕೆ ಬಂದ ತಿಮಿಂಗಿಲಕ್ಕೆ ಈಜಲು ನೀರು ಸಾಲದೆ ಮೃತಪಟ್ಟಿರಬೇಕು ಎಂದು ಊಹಿಸಲಾಗಿದೆ.
ಸುಮಾರು 25 ಅಡಿ ಉದ್ದದ ಈ ಭಾರೀ ಗಾತ್ರದ, ತೂಕದ ಮೀನು ಪಶ್ಚಿಮ ಕರಾವಳಿಯ ತೀರ ಪ್ರದೇಶದಲ್ಲಿ ಕಾಣಬರುವುದು ತೀರಾ ಅಪರೂಪವೆನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!