Saturday, November 27, 2021

ರಾಜ್ಯದಲ್ಲೂ ಶಾಸಕರ ವೇತನ ಶೇ.30 ಕಡಿತಕ್ಕೆ ನಿರ್ಧಾರ

Follow Us

ಬೆಂಗಳೂರು: ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯದಲ್ಲೂ ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ ಮಾಡಲು ತೀರ್ಮಾನಿಸಲಾಗಿದೆ.
ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳೂ ಸಮ್ಮತಿಸಿದ್ದು, ಸರ್ಕಾರೀ ನೌಕರರ ವೇತನ ಕಡಿತಗೊಳಿಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈ ಮಧ್ಯೆ, ಕೊರೋನಾ ಮುಕ್ತ ರಾಜ್ಯದ 12 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ಸರ್ಕಾರ ಸಿದ್ಧವಾಗಿದೆ. ಆದರೆ ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಅಗತ್ಯ ಎಂದು ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದ 30 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಯಾವುದೇ ಕೊರೋನಾ ಪ್ರಕರಣ ದಾಖಲಾಗಿಲ್ಲ.
ರಾಜ್ಯದ ಆದಾಯ ಹೆಚ್ಚಳಕ್ಕೆ ಅನುವಾಗುವಂತೆ ಸರ್ಕಾರವು ಮದ್ಯ ಮಾರಾಟದ ಮೇಲಿನ ನಿರ್ಬಂಧವನ್ನು ಸಡಿಲಿಸಲೂ ಉದ್ದೇಶಿಸಿದೆ ಎಂದು ಅವರು ಹೇಳಿದ್ದಾರೆ.
ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ (ಏಪ್ರಿಲ್ 9) ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!