newsics.com
ಬೆಂಗಳೂರು: ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ಸೋಲುಂಟಾಯಿತು.
ಶನಿವಾರ ಐದು ಗಂಟೆ ಕಾಲ ನಡೆದ ಚರ್ಚೆಯ ನಂತರ ನಿರ್ಣಯವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಧ್ವನಿಮತಕ್ಕೆ ಹಾಕಿ ನಿರ್ಣಯ ತಿರಸ್ಕರಿಸಲ್ಪಟ್ಟಿದೆ ಎಂದು ಘೋಷಿಸಿದರು.
ಸುದೀರ್ಘ ಚರ್ಚೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸತ್ಯಾಂಶ ಸಾಬೀತು ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ಇದರ ವಿರುದ್ಧ ಸಿಬಿಐಗಾದ್ರೂ ಹೋಗಿ ಲೋಕಾಯುಕ್ತಕ್ಕಾದರೂ ದೂರು ಕೊಡಿ ಎಂದು ಆಕ್ರೋಶಭರಿತರಾಗಿ ಹೇಳಿದರು. ಹಗರಣದಲ್ಲಿ ನಮ್ಮ ಕುಟುಂಬದವರ ಪಾತ್ರ ಇದ್ದರೆ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಸವಾಲು ಹಾಕಿದರು.
ಮುಂಬರುವ ಉಪ ಚುನಾವಣೆಯಲ್ಲಿ ಜನರ ಮುಂದೆ ಆರೋಪ ಮಾಡಿ. ಜನರು ಏನು ತೀರ್ಮಾನ ಕೊಡುತ್ತಾರೋ ನೋಡೋಣ. ಮುಂದಿನ ಚುನಾವಣೆಯಲ್ಲಿ 135 ಸ್ಥಾನ ಗೆಲ್ಲಿಸುವ ಜವಾಬ್ದಾರಿ ನನ್ನದು. ಇನ್ನೂ 10 ವರ್ಷ ಕಾಂಗ್ರೆಸ್ ಪ್ರತಿಪಕ್ಷದಲ್ಲಿಯೇ ಇರುವಂತಾಗುತ್ತದೆ ಎಂದರು.
ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು
Follow Us