ಬೆಂಗಳೂರು: ಸಾಹಿತಿ ಚಿಂತಕ ಡಾ.ಚಿದಾನಂದಮೂರ್ತಿಯವರ ನಿಧನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನಾಳೆಯ ದೆಹಲಿ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ಶನಿವಾರ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ದೆಹಲಿಗೆ ಹೋಗುತ್ತಿಲ್ಲ. ಜ.17, 18 ರಂದು ಕೇಂದ್ರ ಗೃಹ ಸಚಿವರೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಬಂದಾಗಲೇ ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ ಎಂದರು.
ಮೂಲಗಳ ಪ್ರಕಾರ, ಯಡಿಯೂರಪ್ಪ ಅವರು ಜ.17ಕ್ಕೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಕಳೆದ ತಿಂಗಳು ನಡೆದಿದ್ದ ಉಪ ಚುನಾವಣೆಯಲ್ಲಿ ಗೆದ್ದ 11 ಶಾಸಕರ ಪೈಕಿ ಏಳು ಮಂದಿಗೆ ಮಾತ್ರ ಮಂತ್ರಿ ಸ್ಥಾನ ನೀಡಲು ಬಿಎಸ್ವೈ ಯೋಜಿಸಿದ್ದರಾದರೂ . ರಮೇಶ್ ಜಾರಕಿಹೊಳಿ ಒತ್ತಡದ ಪರಿಣಾಮ ಸಂಪುಟದಲ್ಲಿ 9 ಮಂದಿಗೆ ಸಂಪುಟದಲ್ಲಿ ಅವಕಾಶ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ದೆಹಲಿ ಭೇಟಿ ರದ್ದುಗೊಳಿಸಿದ ಸಿಎಂ
Follow Us