Saturday, April 17, 2021

ಶಾಲಾ ಕಾಲೇಜು ತರಗತಿಗಳಿಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಕೊರೋನಾ ಸಂಕಷ್ಟ ಹೊಸ ಶೈಕ್ಷಣಿಕ ವರ್ಷಕ್ಕೂ ಅಡ್ಡಿ ತಂದೊಡ್ಡಿದೆ. ವಿದ್ಯಾರ್ಥಿಗಳಲ್ಲಿ ಗೊಂದಲ, ಆತಂಕವನ್ನು ಹೆಚ್ಚಿಸುತ್ತಲೇ ಇದೆ. ರಾಜ್ಯದಲ್ಲಿ ಯಾವಾಗ ಶಾಲಾ ಕಾಲೇಜುಗಳು ಆರಂಭವಾಗುತ್ತದೆ ಎಂಬುದಕ್ಕೆ ಈಗಲೂ ಉತ್ತರವಿಲ್ಲ.
ಈ ಮಧ್ಯೆ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೊಸ ಮಾರ್ಗಸೂಚಿಯೊಂದನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.
ಮಾರ್ಗಸೂಚಿಯ ಪ್ರಕಾರ, ಶಾಲಾ ತರಗತಿ ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಒಂದು ಡೆಸ್ಕ್ ನಲ್ಲಿ 3 ವಿದ್ಯಾರ್ಥಿಗಳಿಗೆ ಮಾತ್ರ ಕುಳಿತುಕೊಳ್ಳಲು ಅವಕಾಶ ಕಲ್ಪಿಸಬೇಕು. ಕೊಠಡಿಗಳ ಕೊರತೆ ಕಂಡುಬಂದರೆ ಶಾಲಾ ಗ್ರಂಥಾಲಯ ಕೊಠಡಿ, ಕ್ರೀಡಾ ಕೊಠಡಿ ಮತ್ತು ಕಂಪ್ಯೂಟರ್ ಕೊಠಡಿಗಳನ್ನು ಬಳಸಿಕೊಳ್ಳಬಹುದು.
ಜನವಸತಿ ಪ್ರದೇಶಗಳಲ್ಲಿ ಲಭ್ಯವಿರುವ ಸಮುದಾಯ ಭವನಗಳು, ಸರ್ಕಾರಿ ಕಟ್ಟಡಗಳು ಹಾಗೂ ಮಧ್ಯಾಹ್ನದ ಬಳಿಕ ಲಭ್ಯವಿರುವ ಅಂಗನವಾಡಿ ಕಟ್ಟಡಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ 1ರಿಂದ 5ನೇ ತರಗತಿವರೆಗಿನ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವುದರಿಂದ ಇವುಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಪಾಳಿ ವ್ಯವಸ್ಥೆಯಲ್ಲಿ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. 1ರಿಂದ 7ನೇ ತರಗತಿವರಗಿನ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ತರಗತಿ ನಡೆಸಲು ಲಭ್ಯ ಎಲ್ಲಾ ವ್ಯವಸ್ಥೆಗಳು ಸಾಲದಾದಲ್ಲಿ ಪಾಳಿ ಪದ್ಧತಿಯಲ್ಲಿ ತರಗತಿಗಳನ್ನು ನಡೆಸಲು ತಿಳಿಸಲಾಗಿದೆ.
1 ಮತ್ತು 2ನೇ ತರಗತಿ ನಲಿ ಕಲಿ ಮಕ್ಕಳನ್ನು ಒಟ್ಟಿಗೆ ಸೇರ್ಪಡೆ ಮಾಡಿ ಬೋಧನೆಗೆ ಅವಕಾಶ ಕಲ್ಪಿಸಬಹುದು. 1ರಿಂದ 7ನೇ ತರಗತಿಯವರೆಗೆ ಶಿಕ್ಷಕರ ಕೊರತೆ ಇದ್ದಲ್ಲಿ ಸ್ಥಳೀಯವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಪ್ರಾಥಮಿಕ ಶಾಲೆಗಳಲ್ಲೂ ಪದವಿ ಪಡೆದಿರುವ ಶಿಕ್ಷಕರು ಲಭ್ಯವಿರುವುದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಪರಸ್ಪರ ಸಮಾಲೋಚನೆ ನಡೆಸಿ ಪ್ರೌಢಶಾಲಾ ಶಿಕ್ಷಕರು 6 ಮತ್ತು 7ನೇ ತರಗತಿಗಳಿಗೂ ಪ್ರಾಥಮಿಕ ಶಾಲೆಗಳಲ್ಲಿ ಪದವಿ ಹೊಂದಿರುವ ಶಿಕ್ಷಕರು 8 ಮತ್ತು 9ನೇ ತರಗತಿಗಳಿಗೂ ಬೋಧಿಸಲು ಅವಕಾಶ.
ಪಿಯು ತರಗತಿಗಳು 10 ಗಂಟೆಯಿಂದ 3.30ರವರೆಗೆ ನಡೆಯುತ್ತಿವೆ. ಆದರೆ ಈ ತರಗತಿಗಳನ್ನು ಬೆಳಗ್ಗೆ 8.30 ರಿಂದ 12.30ರವರೆಗೆ ನಡೆಸಿ, ಪ್ರೌಢಶಾಲಾ ಕೊಠಡಿಗಳನ್ನು ಬಳಸಿಕೊಂಡು ಪಿಯು ತರಗತಿಗಳನ್ನು ಸೂಕ್ತ ಸಾಮಾಜಿಕ ಅಂತರದೊಂದಿಗೆ ನಡೆಸಲು ಸೂಚನೆ ನೀಡಲಾಗಿದೆ.
ರಾಜ್ಯದ ತಾಲೂಕು/ಹೋಬಳಿ ಕೇಂದ್ರಗಳಲ್ಲಿ ಕೆಲವು ಶಾಲೆಗಳು ಮಕ್ಕಳ ಕೊರತೆಯಿಂದ ಮುಚ್ಚಲ್ಪಟ್ಟಿದ್ದು, ಅವುಗಳನ್ನು ಅಗತ್ಯ ದುರಸ್ತಿ ಮಾಡಿಸಿ ಪ್ರೌಢಶಾಲೆಯ ಕೆಲವು ತರಗತಿಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸೂಚನೆ ನೀಡಿದೆ.
ಪಾಳಿ ಪದ್ಧತಿಯಲ್ಲಿ ತರಗತಿ:
ಮೊದಲನೇ ಪಾಳಿ ಸಮಯ ಬೆಳಗ್ಗೆ 7.50ರಿಂದ ಆರಂಭಗೊಂಡು ಮಧ್ಯಾಹ್ನ 12.20ರವರೆಗೆ ನಡೆಸುವುದು ಹಾಗೂ ಎರಡನೇ ಪಾಳಿಯನ್ನು ಮಧ್ಯಾಹ್ನ 12.10ರಿಂದ ಸಂಜೆ 5 ಗಂಟೆಯವರೆಗೆ ನಡೆಸಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!