newsics.com
ಬೆಂಗಳೂರು: ಮಾದಕ ವಸ್ತುಗಳ ಮಾರಾಟ ಆರಂಭಿಸಿದ್ದ ವಿದೇಶಿ ಪ್ರಜೆ ಸೇರಿ ಐವರನ್ನು ಹೆಣ್ಣೂರು ಪೊಲೀಸರು ಬಂಧಿಸಿ 5 ಲಕ್ಷ ರೂ. ಬೆಲೆಬಾಳುವ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸೂಡಾನ್ ದೇಶದ ಅಹಮ್ಮದ್ ಒಮರ್ (27), ತಾಬ್‍ಶೇರ್(24), ಲಜೀಮ್(23), ಸೈಯದ್ ಶಕೀರ್(24), ಮೊಹಮ್ಮದ್ ಶಿಹಾಮ್ (28) ಬಂಧಿತರು.
ಆರೋಪಿಗಳಿಂದ 50 ಗ್ರಾಂ 100 ಮಾದಕ ಮಾತ್ರೆಗಳು, 10 ಗ್ರಾಂ ಎಂಡಿಎಂಎ ಕ್ರೈಸ್ಟಲ್ ವಶವಡಿಸಿಕೊಂಡಿದ್ದು ಇವುಗಳ ಮೌಲ್ಯ 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲಿ ಎಂಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ವೇಳೆ ಮಾದಕ ವಸ್ತುಗಳ ಸೇವನೆ ಚಟಕ್ಕೆ ಬಿದ್ದು ಹಣಕಾಸಿನ ತೊಂದರೆಯಿಂದ ಆರೋಪಿಗಳು ಮಾದಕ ವಸ್ತುಗಳ ಮಾರಾಟಕ್ಕಿಳಿದಿದ್ದರು ಎನ್ನಲಾಗಿದೆ. ಪೊಲೀಸರು ಅಪಾರ್ಟ್‍ಮೆಂಟ್ ಮೇಲೆ ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ. ಆರೋಪಿ ಅಹಮ್ಮದ್ ಒಮರ್ ಆಫ್ರಿಕನ್ ಪ್ರಜೆಗಳಿಂದ ಮಾದಕ ವಸ್ತುಗಳನ್ನು ಖರೀದಿಸಿ ತನ್ನ ಜೊತೆ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದುದು ಹೆಚ್ಚಿನ ತನಿಖೆಯಿಂದ ಗೊತ್ತಾಗಿದೆ.
ಮಾದಕ ವಸ್ತು ಮಾರುತ್ತಿದ್ದ ಐವರು ವಿದ್ಯಾರ್ಥಿಗಳ ಬಂಧನ
Follow Us