Tuesday, April 13, 2021

ನಾಳೆ ಶೃಂಗೇರಿ ಶಾರದಾಂಬೆಯ ದರ್ಶನ ಭಾಗ್ಯ ಇಲ್ಲ

ಶೃಂಗೇರಿ: ಕೊರೋನಾದ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಬಹುತೇಕ ದೇವಾಲಯಗಳು ನಾಳೆ ತೆರೆಯಲಿದ್ದರೂ ಕೆಲವು ದೇವಸ್ಥಾನಗಳು ಸ್ವಲ್ಪ ದಿನ ಕಾಯಲು ನಿರ್ಧರಿಸಿವೆ. ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನ ಪೂರ್ಣೇಶ್ವರಿ ಮತ್ತು  ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ  ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಭಕ್ತರ ಪ್ರವೇಶವನ್ನು ಕೆಲವು ದಿನಗಳ ಕಾಲ ತಡೆಹಿಡಿಯಲಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳ ಕಂಡು ಬಂದಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳ ಆಡಳಿತ ಮಂಡಳಿ ಈ ತೀರ್ಮಾನ ತೆಗೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ದೇವಸ್ಥಾನಗಳು ಕೂಡ ಇದೇ ತೀರ್ಮಾನಕ್ಕೆ ಬಂದಿವೆ. ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಹಲವು ಶರತ್ತುಗಳನ್ನು ವಿಧಿಸಿ ದೇವಾಲಯಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!