newsics.com
ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಲಾರಿ ಮಾಲೀಕರು ಸದ್ಯದಲ್ಲೇ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ತೈಲ ಬೆಲೆ ಇಳಿಸಬೇಕು. ತೈಲದ ಮೇಲಿನ ತೆರಿಗೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಈ ಸಂಬಂಧ ಲಾರಿ ಸಂಘಟನೆಗಳೊಂದಿಗೆ ತುರ್ತು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಮತ್ತು ಏಜೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.
ತೈಲ ದರ ಹೆಚ್ಚಳ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಲಾರಿ ಉದ್ಯಮ ಸಂಕಷ್ಟಕ್ಕೀಡಾಗಿದ್ದು, ಸಾಲ ಮರುಪಾವತಿಸಲಾಗದೆ ಸುಮಾರು 60 ಸಾವಿರಕ್ಕೂ ಹೆಚ್ಚು ಲಾರಿಗಳನ್ನು ಫೈನಾನ್ಸ್ನವರು ವಶಕ್ಕೆ ಪಡೆದಿದ್ದಾರೆ ಎಂದು ಅವರು ಹೇಳಿದರು.