newsics.com
ಬೆಂಗಳೂರು: ಸುದೀರ್ಘ 8 ದಿನಗಳ ಆಸ್ಪತ್ರೆ ವಾಸದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೆಪ್ಟೆಂಬರ್ 2 ರಂದು ಡಿ.ಕೆ.ಶಿವಕುಮಾರ್ ಜ್ವರ ಹಾಗೂ ಕೋವಿಡ್ 19 ಲಕ್ಷಣಗಳೊಂದಿಗೆ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಡಿ.ಕೆ.ಶಿವಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಜಯನಗರ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಕೊರೋನಾ ಸೋಂಕಿನ ಬಳಿಕ ತೀವ್ರ ಜ್ವರದಿಂದ ಬಳಲಿದ್ದ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು.
ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್
Follow Us