Saturday, November 26, 2022

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ದೇವಿ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಶಿಫಾರಸು

Follow Us

newsics.com

ಬೆಂಗಳೂರು: ಕೊರೋನಾ ಎರಡನೆ ಅಲೆ ಬಹುತೇಕ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ  ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಡಾ. ದೇವಿ ಶೆಟ್ಟಿ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ.

ಈ ಕುರಿತ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಮಿತಿ ಸಲ್ಲಿಸಿದೆ. ಪೋಷಕರಲ್ಲಿ  ವಿಶ್ವಾಸ ಮೂಡಿಸುವ ಕ್ರಮದ ಭಾಗವಾಗಿ ಎಲ್ಲ ಮಕ್ಕಳ ಹೆಸರಿನಲ್ಲಿ ಎರಡು ಲಕ್ಷ ರೂಪಾಯಿ ವಿಮೆ ಮಾಡಬೇಕು. ಇದರ ಮೊತ್ತ ಸರ್ಕಾರ ಭರಿಸಬೇಕು ಎಂದು ಸಮಿತಿ ಸೂಚಿಸಿದೆ.

ಗ್ರಾಮೀಣ, ನಗರ ಸೇರಿದಂತೆ ಎಲ್ಲ ಪ್ರದೇಶಗಳಲ್ಲಿ ಇರುವ ಶಾಲೆ ಆರಂಭಕ್ಕೆ ಸಮಿತಿ ಒಲವು ವ್ಯಕ್ತಪಡಿಸಿದೆ.

ಶಾಲೆಗಳಿಂದ ಕೊರೋನಾ ಹರಡುತ್ತಿದೆ ಎಂಬ ವಾದವನ್ನು ಇದುವರೆಗೆ ಪುಷ್ಟೀಕರಿಸಲಾಗಿಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಮೂಲಕ ರಾಜ್ಯದಲ್ಲಿ ಶಿಕ್ಷಣ ಚಟುವಿಟಿಕೆಗೆ ಚಾಲನೆ ನೀಡಬೇಕು ಎಂದು ಸಮಿತಿ ತನ್ನ ವರದಿಯಲ್ಲಿ ಹೇಳಿದೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!