newsics.com
ಮೈಸೂರು : 5 ರೂಪಾಯಿ ಡಾಕ್ಟರ್ ಎಂದೇ ಮಂಡ್ಯದಲ್ಲಿ ಚಿರಪರಿಚಿತರಾಗಿ ರಾಜ್ಯ ಮಟ್ಟದಲ್ಲಿಯೂ ಸುದ್ದಿ ಮಾಡಿರುವ ಡಾ. ಶಂಕರೇಗೌಡರಿಗೆ ಸೋಮವಾರ ಹೃದಯಾಘಾತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಂಕರೇಗೌಡರಿಗೆ ಹೃದಯಾಘಾತವಾಗುತ್ತಿದ್ದಂತೆಯೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದು ತಾತ್ಕಾಲಿಕ ಸ್ಟಂಟ್ ಅಳವಡಿಸಲಾಗಿದೆ. ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ .