Wednesday, October 5, 2022

ಡಾ.ಸುಧಾ ಆಪ್ತೆ ರೇಣುಕಾ ಮನೆಯಲ್ಲಿ 250 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ!

Follow Us

newsics.com
ಬೆಂಗಳೂರು: ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತೆ ರೇಣುಕಾ ಚಂದ್ರಶೇಖರ್ ಅವರ ಬ್ಯಾಟರಾಯನಪುರದ ಮನೆಯ ಮೇಲೆಯೂ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಅಲ್ಲಿ ಸಿಕ್ಕಿದ ಆಭರಣ ನೋಡಿ ಕ್ಷಣಕಾಲ ಬೆಚ್ಚಿಬಿದ್ದಿದ್ದಾರೆ.
ರೇಣುಖಾ ಚಂದ್ರಶೇಖರ್ ಮನೆಯಲ್ಲಿ ಚಿನ್ನಾಭರಣ, ನಗ-ನಾಣ್ಯ, ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಿಗಳು ಪತ್ತೆಯಾಗಿವೆ.
ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವಂತ ರೇಣುಕಾ ಚಂದ್ರಶೇಖರ್, ಮಣಬಾರದಷ್ಟು ಚಿನ್ನಾಭರಣ, ಕೋಟ್ಯಾಂತರ ರೂಪಾಯಿ ಆಸ್ತಿ ಪತ್ರಗಳು ಪತ್ತೆಯಾಗಿವೆ. ಸಿಕ್ಕ ಒಟ್ಟಾರೆ ಮೌಲ್ಯ 250 ಕೋಟಿಗೂ ಹೆಚ್ಚು ಎನ್ನಲಾಗುತ್ತಿದೆ. ಕೆಜಿಗಟ್ಟಲೇ ಚಿನ್ನ, ಬೆಳ್ಳಿಯನ್ನು ನೋಡಿದ ಅಧಿಕಾರಿಗಳೇ ಇಷ್ಟೊಂದು ಹೇಗೆ ಸಂಪಾದಿಸಿದ್ದು ಎನ್ನುವ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತ ಅಧಿಕಾರಿ ಡಾ.ಸುಧಾ ಆಪ್ತೆ ರೇಣುಕಾ ಮನೆಯಲ್ಲಿ ಬರೋಬ್ಬರಿ 3 ಕೆಜೆ ಚಿನ್ನ, 7 ಕೆಜಿ ಬೆಳ್ಳಿ, 36 ಲಕ್ಷ ನಗದು ಪತ್ತೆಯಾಗಿದೆ. ಅಲ್ಲದೇ 250 ಕೋಟಿ ಆಸ್ತಿ ಪತ್ರ, 40 ಬ್ಯಾಂಕ್ ಗಳ ಪಾಸ್ ಬುಕ್, 4 ಕೋಟಿ ಡಿಪಾಸಿಟ್, ನೂರಕ್ಕೂ ಹೆಚ್ಚು ಚೆಕ್ ಗಳು, ಒಪ್ಪಂದ ಪತ್ರಗಳು ಪತ್ತೆಯಾಗಿವೆ.
ಈ ಮಧ್ಯೆ, ವಿಚಾರಣೆಗೆ ಹಾಜರಾಗುವಂತೆ ಕೆಎಎಸ್ ಅಧಿಕಾರಿ ಡಾ.ಸುಧಾ ಅವರಿಗೆ ಎಸಿಬಿ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.

ಕಚೇರಿ ವೇಳೆಯಲ್ಲೇ ಅರೆಬೆತ್ತಲೆ ಡ್ಯಾನ್ಸ್; 6 ಮೆಸ್ಕಾಂ ನೌಕರರು ಸಸ್ಪೆಂಡ್

ಬಿಹಾರ ಚುನಾವಣೆ; 1,157 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ

ಬೆಂಗಳೂರು ವಿವಿ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆ

96 ಗಂಟೆಗಳ ಕಾರ್ಯಾಚರಣೆ ವಿಫಲ: ಹಾರಿ ಹೋಯ್ತು ಕೊಳವೆ ಬಾವಿಗೆ ಬಿದ್ದ ಮಗುವಿನ ಪ್ರಾಣ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!