newsics.com
ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳ ಆಯೋಜಿಸಲಾಗಿದೆ. ಸುಮಾರು 9 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
ಮಂಗಳೂರಿಂದಲೇ ಕೋಣಗಳಿಗೆ ಕುಡಿಯುವ ನೀರು: ಊರು ಬಿಟ್ಟು ಮತ್ತೊಂದು ಊರಿಗೆ ಕಂಬಳದ ಕೋಣಗಳು ಬರಲಿರುವುದರಿಂದ ಕೋಣಗಳ ಬಗ್ಗೆ ಮಾಲೀಕರು ವಿಶೇಷ ಮುತುವರ್ಜಿಯನ್ನು ವಹಿಸಿದ್ದು, ಕಂಬಳದ ಕೋಣಗಳಿಗೆ ಕುಡಿಯಲು ನೀರು ಸಹ ಮಂಗಳೂರಿನಿಂದಲೇ ಬರಲಿದೆ. ಆಹಾರದಿಂದ ಹಿಡಿದು ಕುಡಿಯುವ ನೀರಿನ ತನಕ ಮಾಲೀಕರು ಹೆಚ್ಚು ಹೆಚ್ಚು ಎಚ್ಚರಿಕೆಯಿಂದ ಇರುತ್ತಾರೆ. ಕರಾವಳಿ ಮತ್ತು ಬೆಂಗಳೂರಿನ ವಾತಾವರಣ, ಜೀವನ ಶೈಲಿ, ಆಹಾರ ಪದ್ಧತಿ, ನೀರಿನಲ್ಲಿ ಸಾಕಷ್ಟು ವ್ಯತ್ಯಾಸ ಇರುವುದರಿಂದ ಬೆಂಗಳೂರಿನ ಆಹಾರ, ನೀರು ಕೊಡುವುದರಿಂದ ಕೋಣಗಳ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹೀಗಾಗಿ ಕುಡಿಯಲು ನೀರನ್ನು ಸಹ ಕರಾವಳಿಯಿಂದಲೇ 8 ಟ್ಯಾಂಕರ್‌ನಷ್ಟು ತರಲು ನಿರ್ಧರಿಸಲಾಗಿದೆ.
ಐಶ್ವರ್ಯ ರೈ, ರಜಿನಿಕಾಂತ್ ಆಗಮಿಸುವ ನಿರೀಕ್ಷೆ: ನಟಿ ಐಶ್ವರ್ಯ ರೈ ಹಾಗೂ ನಟ ರಜಿನಿಕಾಂತ್ ಕಂಬಳ ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆ ಇದೆ. ಸದ್ಯ ನಟಿ ಅನುಷ್ಕಾ ಶೆಟ್ಟಿ ಅವರು ಕಂಬಳಕ್ಕೆ ಬರುವುದು ಪಕ್ಕಾ ಆಗಿದೆ. ಈ ಅದ್ದೂರಿ ಕಾರ್ಯಕ್ರಮಕ್ಕೆ ಬಾಲಿವುಡ್, ಸ್ಯಾಂಡಲ್ ವುಡ್ ಸೇರಿ ಎಲ್ಲಾ ಚಿತ್ರರಂಗದ ಗಣ್ಯರಿಗೆ ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ 100 ಜೋಡಿಗೂ ಅಧಿಕ ಕೋಣಗಳು ಬೆಂಗಳೂರಿಗೆ ಆಗಮಿಸಲಿವೆ.
ಐಎಸ್‌ಐನ ಹೆಚ್ಚುವರಿ ಮಹಾ ನಿರ್ದೇಶಕ ಸ್ಥಾನದಲ್ಲಿ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ