Monday, August 8, 2022

ಐಎಸ್ ಡಿ ವಿಚಾರಣೆಗೆ ಹಾಜರಾದ ಅಭಿಷೇಕ್, ಗೀತಾ

Follow Us

ಬೆಂಗಳೂರು: ಮಾದಕ ದ್ರವ್ಯ ಜಾಲದ ಕುರಿತು ತನಿಖೆ ನಡೆಸುತ್ತಿರುವ ಆಂತರಿಕ ಭದ್ರತಾ ವಿಭಾಗದ ಪೊಲೀಸರ ಮುಂದೆ ಕಿರು ತೆರೆ ನಟ  ಅಭಿಷೇಕ್ ಮತ್ತು ನಟಿ ಗೀತಾ ಭಟ್ ಇಂದು ಹಾಜರಾಗಿದ್ದಾರೆ. ಶಾಂತಿ ನಗರದಲ್ಲಿರುವ ಐಎಸ್ ಡಿ ಕಚೇರಿಯಲ್ಲಿ ಇದೀಗ ಇಬ್ಬರು ವಿಚಾರಣೆ ಎದುರಿಸುತ್ತಿದ್ದಾರೆ.

ಡಿವೈಎಸ್ ಪಿ ಸುದರ್ಶನ್ ನೇತೃತ್ವದ ತಂಡ ಇಬ್ಬರನ್ನು ವಿಚಾರಣೆಗೆ ಗುರಿಪಡಿಸಲಿದೆ. ತನಿಖಾ ಅಧಿಕಾರಿಗಳ ಮುಂದೆ ಹಾಜರಾಗುವ ಮೊದಲು ಮಾತನಾಡಿದ ಇಬ್ಬರು ತಮ್ಮ ಮೇಲಿನ ಆರೋಪ ನಿರಾಕರಿಸಿದರು. ಮಾದಕ ದ್ರವ್ಯ ಜಾಲದ ಜತೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಹೇಳಿದರು.

ತನಿಖಾ ಅಧಿಕಾರಿಗಳು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ. ಇದರಲ್ಲಿ ಮುಚ್ಚು ಮರೆಯ ಪ್ರಶ್ನೆ ಇಲ್ಲ ಎಂದು ಅಭಿಷೇಕ್ ಮತ್ತು ಗೀತಾ ಭಟ್ ಇದೇ ಸಂದರ್ಭದಲ್ಲಿ ಪುನರುಚ್ಚರಿಸಿದರು.

ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಐಎಸ್ ಡಿಯ ಮುಖ್ಯಸ್ಥರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!