newsics.com
ಬೆಂಗಳೂರು/ಮಂಗಳೂರು: ಡಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದ ಮಾಹಿತಿ ಆಧರಿಸಿ ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ಅವರನ್ನು ಬಂಧಿಸಿದ್ದರು. ವಿಚಾರಣೆ ವೇಳೆ ತರುಣ್ ನಿರೂಪಕಿ ಅನುಶ್ರೀ ಅವರ ಹೆಸರನ್ನು ಹೇಳಿದ್ದ ಎನ್ನಲಾಗಿದೆ.
ಈ ಮಾಹಿತಿ ಆಧರಿಸಿ ವಿಚಾರಣೆಗೆ ಹಾಜರಾಗುವಂತೆ ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಮಂಗಳೂರಿನ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ವಾಟ್ಸ್ ಆಪ್ ಮೂಲಕ ನೋಟಿಸ್ ಜಾರಿ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರೂಪಕಿ ಅನುಶ್ರೀ, ನನಗೆ ಸಿಸಿಬಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ನೀಡಿದರೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಎನ್’ಸಿಬಿ ಸಮನ್ಸ್’ಗೆ ಕೊನೆಗೂ ಸ್ಪಂದಿಸಿದ ರಕುಲ್ ಪ್ರೀತ್ ಸಿಂಗ್
ಸ್ಥಳೀಯ ಮಟ್ಟದಲ್ಲಿ ಲಾಕ್ ಡೌನ್ ಬೇಡ: ರಾಜ್ಯಗಳಿಗೆ ಕೇಂದ್ರ ಸೂಚನೆ
ಶ್ರೀಮಂತ ದೇಶದಲ್ಲಿ ಭಿಕ್ಷೆ ಬೇಡಿ ಜೈಲು ಸೇರಿದ ಭಾರತೀಯರು..!