newsics.com
ಬೆಂಗಳೂರು: ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಮತ್ತೊಬ್ಬ ಯುವಕನನ್ನು ವಶಕ್ಕೆ ಪಡೆದಿದೆ.
ಚಂದನವನ ಡ್ರಗ್ಸ್ ಜಾಲದಲ್ಲಿ ಭಾಗಿಯಾದ ಆರೋಪದಡಿ ಸಂಗೀತ ದಂತಕುಡಿ ಎಂಬುವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಪೆಡ್ಲರ್ ಜತೆಯಲ್ಲಿ ಸಂಪರ್ಕವಿಟ್ಟುಕೊಂಡು ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಸಂಗೀತ ಅವರನ್ನು ಸದಾಶಿವನಗರದಲ್ಲಿ ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿರುವ ಫ್ಲ್ಯಾಟ್ ಮೇಲೆ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಸಂಗೀತಾ ವಿಚಾರಣೆ ನಡೆಯುತ್ತಿದ್ದು, ದಿವಂಗತ ಮುತ್ತಪ್ಪ ರೈ ಜತೆಯಲ್ಲೂ ಸಂಗೀತ ಗುರುತಿಸಿಕೊಂಡಿದ್ದರು ಎನ್ನಲಾಗಿದೆ.
ತಿಂಗಳಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ; ಶರತ್ ಜಾಗಕ್ಕೆ ರೋಹಿಣಿ ಸಿಂಧೂರಿ
‘ಭುವನದ ಭಾಗ್ಯ’ ಡಾ.ಜಿ.ಎಸ್. ಆಮೂರ ಇನ್ನಿಲ್ಲ