newsics.com
ಮಂಗಳೂರು: ಮಾದಕ ದ್ರವ್ಯ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದ ಆ್ಯಂಕರ್ ಅನುಶ್ರೀ ಕಚೇರಿಯಿಂದ ಹೊರಬಂದಿದ್ದಾರೆ. ಅವರ ಇಂದಿನ ವಿಚಾರಣೆ ಪೂರ್ಣಗೊಂಡಿದೆ. ಪಣಂಬೂರಿನಲ್ಲಿರುವ ಸಿಸಿಬಿ ಕಚೇರಿಯಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ತಂಡ ಅವರನ್ನು ವಿಚಾರಣೆಗೆ ಗುರಿಪಡಿಸಿತ್ತು.
ವಿಚಾರಣೆ ಮುಗಿಸಿ ಹೊರಬಂದ ಬಳಿಕ ಮಾತನಾಡಿದ ಅನುಶ್ರೀ ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಎಂದು ಹೇಳಿದರು. ವಿಚಾರಣೆಗೆ ಮತ್ತೆ ಕರೆದರೆ ಬರುವುದಾಗಿಯೂ ಅವರು ತಿಳಿಸಿದರು. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಗಳಿಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು.
ಮೂರು ಗಂಟೆಗಳ ಕಾಲ ಅನುಶ್ರೀ ಅವರನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದ ಅಧಿಕಾರಿಗಳ ತಂಡ ಅವರಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಗೈದಿತ್ತು.