ಮಂಗಳೂರು: ಮಾದಕ ದ್ರವ್ಯ ಜಾಲದ ತನಿಖೆ ಮಂಗಳೂರಿಗೂ ಮುಂದುವರಿದಿದೆ. ಈ ಸಂಬಂಧ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಧಿಕೃತವಾಗಿ ಇದನ್ನು ಪ್ರಕಟಿಸಿದ್ದಾರೆ.
ಕಿಶೋರ್ ಶೆಟ್ಟಿ ಮಂಗಳೂರಿನಲ್ಲಿ ಇತ್ತೀಚೆಗೆ ಡ್ರಗ್ಸ್ ಪಾರ್ಟಿ ಆಯೋಜಿಸಿದ್ದ ಎಂದು ಕೂಡ ಆರೋಪಿಸಲಾಗಿದೆ. ಈ ಪಾರ್ಟಿಯಲ್ಲಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಆ್ಯಂಕರ್ ರೊಬ್ಬರು ಕೂಡ ಭಾಗವಹಿಸಿದ್ದಳು ಎಂಬ ಆಘಾತಕಾರಿ ಮಾಹಿತಿ ಕೂಡ ಹೊರಬಿದ್ದಿದೆ