newsics.com
ಕಲಬುರ್ಗಿ: ರಾಜ್ಯದ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ರಾಯಕೋಡ ಗ್ರಾಮದಲ್ಲಿ ಇಂದು ಮುಂಜಾನೆ ಭೂಕಂಪನದ ಅನುಭವವಾಗಿದೆ.
ಮುಂಜಾನೆ 5.20ಕ್ಕೆ ಭೂಮಿ ನಡುಗಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಭಯದಿಂದ ಜನರು ಮನೆಯ ಹೊರಗಡೆ ಓಡಿ ಬಂದಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ವಿಜಯಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗುತ್ತಿದೆ.