Friday, May 20, 2022

ನಾಳೆಯಿಂದ ಜೈಲಿನಲ್ಲೇ 5 ದಿನ ರಾಗಿಣಿ, ಸಂಜನಾಗೆ ಇಡಿ ಡ್ರಿಲ್

Follow Us

newsics.com
ಬೆಂಗಳೂರು: ಡ್ರಗ್‌ ಜಾಲದಲ್ಲಿ ಭಾಗಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ನಾಳೆಯಿಂದ (ಸೆ.25) ಜೈಲಿನಲ್ಲಿಯೇ ವಿಚಾರಣೆ ನಡೆಸಲಿದ್ದಾರೆ.
ಜೈಲಿನಲ್ಲಿಯೇ ವಿಚಾರಣೆ ನಡೆಸಲು ರಾಗಿಣಿ- ಸಂಜನಾ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದುಕೊಂಡಿದ್ದು, ಅಕ್ರಮ ಹಣಕಾಸು ವ್ಯವಹಾರ ಕುರಿತಂತೆ ಮಾಹಿತಿ ಸಂಗ್ರಹಿಸಲಿದ್ದಾರೆ.

ಮುಂದುವರಿದ ಜೈಲುವಾಸ; ರಾಗಿಣಿ, ಸಂಜನಾಗೆ ಮತ್ತೊಂದು ಸಂಕಷ್ಟ

ಡ್ರಗ್ಸ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡಿತ್ತು. ಡ್ರಗ್ಸ್ ಪ್ರಕರಣದಲ್ಲಿ ಇಬ್ಬರೂ ನಟಿಯರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಐದು ದಿನಗಳ ಕಾಲ ಇಡಿ ಅಧಿಕಾರಿಗಳು ಜೈಲಿನಲ್ಲಿ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದೆ. ನಾಳೆಯಿಂದ ಐದು ದಿನ ಇಡಿ ಇಬ್ಬರೂ ನಟಿಯರನ್ನು ವಿಚಾರಣೆಗೆ ಒಳಪಡಿಸಲಿದೆ. ರವಿಶಂಕರ್, ವೀರೇನ್ ಖನ್ನಾ, ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಆಗಿದೆ. ಪ್ರತೀಕ್ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆ 28 ಕ್ಕೆ ಮುಂದೂಡಿಕೆಯಾಗಿದೆ. ಆರೋಪಿಗಳಾದ ನಿಯಾಜ್ ಅಹಮ್ಮದ್ ಮತ್ತು ವೈಭವ್ ಜೈನ್ ಜಾಮೀನು ಅರ್ಜಿ ಸಹ ಸೆಪ್ಟೆಂಬರ್ 29ಕ್ಕೆ ಮುಂದೂಡಿಕೆಯಾಗಿದೆ.

ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ಸೆ.29ಕ್ಕೆ ಮುಂದೂಡಿಕೆ

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!