ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ, ವಿದೇಶದಲ್ಲಿ ಅಕ್ರಮ ಹೂಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಹಾಗೂ ಕುಟುಂಬ ಸದಸ್ಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಜಾರ್ಜ್ ವಿದೇಶದಲ್ಲಿ ಮಕ್ಕಳು ಹಾಗೂ ಕುಟುಂಬದ ಸದಸ್ಯರ ಹೆಸರಿನಲ್ಲಿ ಆಸ್ತಿ ಮಾಡಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ನಮೂದಿಸಿಲ್ಲ ಎಂದು ಆರೋಪಿಸಿ ಹೋರಾಟಗಾರ ರವಿಕೃಷ್ಣಾರೆಡ್ಡಿ ಕಳೆದ ಮೂರು ತಿಂಗಳ ಹಿಂದೆ ದೂರು ನೀಡಿದ್ದರು. ಈ ಸಂಬಂಧ ಜ. 16ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ.
ಮಾಜಿ ಸಚಿವ ಕೆ.ಜೆ.ಜಾರ್ಜ್ಗೆ ಇಡಿ ಸಮನ್ಸ್
Follow Us