newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ಮಾನ್ಯತಾ ಕಚೇರಿಗಳ ಮೇಲೆ ಇ ಡಿ ದಾಳಿ ನಡೆಸಿದೆ.
ರಿಚ್ಮಂಡ್ ರಸ್ತೆ ಸೇರಿದಂತೆ ಸಂಸ್ಥೆಯ ಪ್ರಮುಖ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರ ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.
ದಾಳಿ ಸಂಬಂಧ ಮಾನ್ಯತಾ ಸಂಸ್ಥೆ ಯಾವುದೇ ಹೇಳಿಕೆ ನೀಡಿಲ್ಲ. ಶೋಧ ಕಾರ್ಯಾಚರಣೆ ಈಗಲೂ ಮುಂದುವರಿದಿದೆ ಎಂದು ವರದಿಯಾಗಿದೆ.