Saturday, April 17, 2021

ಸುಬ್ರಹ್ಮಣ್ಯ ಬಳಿ ಕಾಡಾನೆ ಹಿಂಡು: ಹೆಚ್ಚಿದ ಆತಂಕ

newsics.com
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಮಲೆಯಾಳ ಐನಕಿದು ರಸ್ತೆಯ ಕೆದಿಲ ಬಳಿ ರಸ್ತೆಯಲ್ಲಿ ಬುಧವಾರ( ಏ.7) ಎಂಟು ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ವಾಹನ ಸವಾರರು ಆತಂಕಕ್ಕೊಳಗಾದ ಘಟನೆ ನಡೆದಿದೆ.
ಎಂಟು ಆನೆಗಳಿರುವ ಹಿಂಡು ಜನರಲ್ಲಿ ಭಯ ಮೂಡಿಸಿದೆ. ಈ ಮಾರ್ಗ ಕಾಡಿನೊಳಗೆ ಹಾದು ಹೋಗಿದ್ದು ದಾರಿ ಮಧ್ಯೆ ಯಾವುದೇ ಮನೆಗಳಿಲ್ಲ. ಆನೆಗಳ ಉಪಟಳದಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಸುಬ್ರಹ್ಮಣ್ಯದಿಂದ ಈ ಮಾರ್ಗವಾಗಿ ತೆರಳುವವರು ಎಚ್ಚರಿಕೆ ವಹಿಸುವಂತೆ ಸ್ಥಳೀಯರಿಗೆ ಸೂಚಿಸಲಾಗಿದೆ.

ಕಲ್ಮಕಾರು ಕಾಡಿನ ದಾರಿಯಲ್ಲಿ ತೆರಳಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!