newsics.com
ಬೆಂಗಳೂರು: ರಾಜ್ಯದ 8 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಪಕ್ಷಗಳ ಪಟ್ಟಿಯಿಂದ ತೆಗದು ಹಾಕಲು ಚುನಾವಣಾ ಆಯೋಗ ತೀರ್ಮಾನಿಸಿದೆ.
ಈ ಪಕ್ಷಗಳು ಅಸ್ತಿತ್ವ ಕಳೆದುಕೊಂಡಿರುವುದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಪರಿಶೀಲನೆಯಿಂದ ಸಾಬೀತಾಗಿರುವುದರಿಂದ ಈ ನಿರ್ಧಾರಕ್ಕೆ ಬಂದಿದೆ.
ಇಂಡಿಯನ್ ಓಟರ್ ವೆಲ್ಫೇರ್ ಪಾರ್ಟಿ, ಕರ್ನಾಟಕ ಕ್ರಾಂತಿ ದಳ, ನವನಿರ್ಮಾಣ ನಾಗರಿಕ ಸಮಿತಿ, ರಾಷ್ಟ್ರೀಯ ಜನಾಂದೋಲನ ಪಕ್ಷ, ಸ್ವರ್ಣ ಯುಗ ಪಾರ್ಟಿ, ಟಿಪ್ಪು ಸುಲ್ತಾನ್ ನ್ಯಾಷನಲ್ ರಿಪಬ್ಲಿಕ್ ಪಾರ್ಟಿ, ಯುನೈಟೆಡ್ ಇಂಡಿಯನ್ ಡೆಮಾಕ್ರಟಿಕ್ ಕೌನ್ಸಿಲ್, ಅರಸ್ ಸಂಯುಕ್ತ ಪಕ್ಷ ಎಂಬ ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳನ್ನು ರಾಜಕೀಯ ಪಕ್ಷಗಳ ಪಟ್ಟಿಯಿಂದ ತೆಗೆದು ಹಾಕಲು ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಚುನಾವಣಾ ಆಯೋಗದ ಈ ಕ್ರಮದಿಂದ ತೊಂದರೆಯಾಗಿದ್ದರೆ ಅಗತ್ಯ ದಾಖಲೆಗಳೊಂದಿಗೆ 30 ದಿನಗಳೊಳಗಾಗಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅಥವಾ ಭಾರತ ಚುನಾವಣಾ ಆಯೋಗವನ್ನು ಸಂಪರ್ಕಿಸಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.