newsics.com
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದೆ. ನವೆಂಬರ್ 21ರಂದು ಬೆಳಗ್ಗೆ8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ನವೆಂಬರ್ 24ರಂದು ರಾಜ್ಯಾಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗಲಿದೆ.
ನವೆಂಬರ್ 6ರಂದು ಗಡಿನಾಡು, ಹೊರನಾಡ ಮತದಾರರು ಕೇಂದ್ರ ಚುನಾವಣಾಧಿಕಾರಿಗಳ ಕಚೇರಿಯಿಂದ ರಿಜಿಸ್ಟರ್ಡ್ ಅಂಚೆಯ ಮೂಲಕ ಮತಪತ್ರ ಕಳುಹಿಸಲು ಕೊನೆಯ ದಿನವಾಗಿದೆ.
ಕೊರೋನಾ ಸಾಂಕ್ರಾಮಿಕದ ಕಾರಣದಿಂದಾಗಿ ರಾಜ್ಯ ಸರ್ಕಾರವು 2021ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಮುಂದೂಡಿತ್ತು. ಇದೀಗ ಈ ಚುನಾವಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ಘೋಷಿಸಿದೆ.
ರಾಜ್ಯದಲ್ಲಿ ಹೊಸದಾಗಿ 310 ಕೊರೋನಾ ಪ್ರಕರಣ ಪತ್ತೆ, 347 ಸೋಂಕಿತರು ಗುಣಮುಖ, 6 ಸಾವು