newsics.com
ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ
ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ.
ಬೆಳಗಾವಿಯ 58 ವಾರ್ಡ್‌ಗಳಿಗೆ, ಹುಬ್ಬಳ್ಳಿ-ಧಾರವಾಡದ 82 ವಾರ್ಡ್‌ಗಳಿಗೆ, ಕಲಬುರ್ಗಿಯ 55 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.
ಆ.16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ. 23 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನ. ಮತ ಎಣಿಕೆ ಸೆ.6ರಂದು ನಡೆಯಲಿದೆ.