newsics.com
ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಕೆಎಸ್ಆರ್ಟಿಸಿಯಲ್ಲೂ ಮೊದಲ ಎಲೆಕ್ಟ್ರಿಕ್ ಬಸ್ ಸಂಚರಿಸಲಿದೆ.
ಬೆಂಗಳೂರಿನಿಂದ ದಾವಣಗೆರೆ, ಮಡಿಕೇರಿ, ಮೈಸೂರು, ವಿರಾಜಪೇಟೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೆ ಹೋಗಿ ಬರಲು ಎಲೆಕ್ಟ್ರಿಕ್ ಬಸ್ಗಳನ್ನು ನಿಯೋಜಿಸಲು ಸಿದ್ಧತೆ ಮಾಡಿಕೊಂಡಿದೆ.
ಗುತ್ತಿಗೆ (ಜಿಸಿಸಿ) ಆಧಾರದಲ್ಲಿ 50 ಬಸ್ಗಳನ್ನು ಪಡೆಯುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೈದರಾಬಾದ್ನ ಇವಿ ಟ್ರಾನ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿ ಕೆಎಸ್ಆರ್ಟಿಸಿಗೆ ಎಲೆಕ್ಟ್ರಿಕ್ ಬಸ್ ಒದಗಿಸಲಿದೆ.
ಏಪ್ರಿಲ್ನಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಬರಲಿದೆ. ಅದರ ಕಾರ್ಯಕ್ಷಮತೆ ಪರಿಶೀಲಿಸಿ ಒಪ್ಪಿಗೆ ಸೂಚಿಸಿದರೆ ಮುಂದಿನ ಮೂರು ತಿಂಗಳಲ್ಲಿ ಉಳಿದ ಬಸ್ಗಳು ನಿಗಮಕ್ಕೆ ಸೇರ್ಪಡೆಯಾಗಲಿವೆ ಎಂದು ಕೆಎಸ್ಆರ್ಟಿಸಿ ಮೂಲಗಳು ತಿಳಿಸಿವೆ.
ಬಸ್ಗಳ ನಿರ್ವಹಣೆ, ಚಾರ್ಜಿಂಗ್ ವ್ಯವಸ್ಥೆಯನ್ನು ಗುತ್ತಿಗೆ ಪಡೆದಿರುವ ಕಂಪನಿಯೇ ನೋಡಿಕೊಳ್ಳಲಿದೆ. ಚಾಲಕರನ್ನು ಅದೇ ಕಂಪನಿ ಒದಗಿಸಲಿದ್ದು, ಕೆಎಸ್ಆರ್ಟಿಸಿಯಿಂದ ನಿರ್ವಾಹಕರನ್ನು ನಿಯೋಜಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಸ್ಗಳು 43 ಸೀಟುಗಳನ್ನು ಹೊಂದಿದ್ದು, ಹವಾನಿಯಂತ್ರಿತ ವ್ಯವಸ್ಥೆ ಇರಲಿದೆ. ಕೆಎಸ್ಆರ್ಟಿಸಿಯಲ್ಲಿ ಸದ್ಯ ಇರುವ ಡೀಸೆಲ್ ಹವಾನಿಯಂತ್ರಿತ ಬಸ್ಗಳಲ್ಲಿನ ಪ್ರಯಾಣ ದರವನ್ನೇ ಎಲೆಕ್ಟ್ರಿಕ್ ಬಸ್ಗಳಿಗೂ ನಿಗದಿ ಮಾಡುವ ಸಾಧ್ಯತೆಯಿದೆ.
ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು