Saturday, April 17, 2021

ರಸ್ತೆ ಮಧ್ಯೆ ನಿಂತ ಗಜರಾಜ: ಟ್ರಾಫಿಕ್ ಜಾಮ್, ಜನ ಹೈರಾಣ

newsics.com
ಹಾಸನ: ಪ್ರತಿಭಟನಾಕಾರರು ರಸ್ತೆ ತಡೆ ನಡೆಸುವುದು, ಟ್ರಾಫಿಕ್ ಜಾಮ್ ಆಗುವುದೆಲ್ಲ  ಸಹಜ.
ಆದರೆ, ಈ ರಸ್ತೆಯಲ್ಲಿ ಅರ್ಧಗಂಟೆಗೂ ಹೆಚ್ಚು  ಕಾಲ ಸಂಚಾರ ಅಸ್ತವ್ಯಸ್ತವಾಗಲು ಪ್ರತಿಭಟನಾಕಾರರು ಖಂಡಿತ ಕಾರಣರಲ್ಲ. ಈ ರಸ್ತೆ ತಡೆಗೆ ಗಜರಾಜ ಕಾರಣ. ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ನಡೆದಿದೆ.
ಗುರುವಾರ ಸಂಜೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೆಂಪುಹೊಳೆ ಸಮೀಪ ರಸ್ತೆ ಮಧ್ಯೆ ಅರ್ಧಗಂಟೆಗೂ ಹೆಚ್ಚು ಕಾಲ ಆನೆ ನಿಂತಿದ್ದರಿಂದ ವಾಹನ ಸವಾರರು ಹೈರಾಣಾದರು. ರಸ್ತೆಯ ಎರಡೂ ಕಡೆಗಳಲ್ಲಿ ಸುಮಾರು 6 ಕಿಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಫೆ. 25ರಂದು ಇದೇ ಸ್ಥಳದಲ್ಲಿ ರಾಜಸ್ಥಾನದ ಭರತ್ ಪುರ್ ಮೂಲದ ವಕೀಲ್ ಎಂಬಾತ ತನ್ನ ವಾಹನ ನಿಲ್ಲಿಸಿ ಬಹಿರ್ದೆಸೆಗೆ ಹೋಗಿದ್ದಾಗ ಹಿಂದಿನಿಂದ ಬಂದ ಕಾಡಾನೆಯೊಂದು ದಾಳಿ ನಡೆಸಿ ಕೊಂದು ಹಾಕಿತ್ತು. ಮತ್ತೆ ಅದೇ ಸ್ಥಳದಲ್ಲಿ ಕಾಡಾನೆ ಬಂದು ರಸ್ತೆ ಮಧ್ಯೆ ನಿಂತಿದ್ದರಿಂದ ವಾಹನ ಸವಾರರು ಆತಂಕಗೊಂಡಿದ್ದರು. ಹೆದ್ದಾರಿ ಮಧ್ಯೆ ಆನೆ ನಿಂತ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತಾದರೂ, ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಜನ ಕಿಡಿಕಾರಿದರು.

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್...

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...
- Advertisement -
error: Content is protected !!