Thursday, December 2, 2021

ಬೆಂಗಳೂರಿನಲ್ಲಿ ಎನ್ ಕೌಂಟರ್: ಸ್ಲಂ ಭರತ್ ಗುಂಡಿಗೆ ಬಲಿ

Follow Us

ಬೆಂಗಳೂರು:  ಪಾತಕಿ ಸ್ಲಂ ಭರತ್ ಬೆಂಗಳೂರಿನಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭರತ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ಕೊಲೆ, ಸುಲಿಗೆ, ಅಪಹರಣ ಸೇರಿದಂತೆ 47  ಪ್ರಕರಣಗಳಲ್ಲಿ ಸ್ಲಂ ಭರತ್ ಆರೋಪಿಯಾಗಿದ್ದ.  ಈ ಹಿಂದೆ ಪೊಲೀಸರು ಸ್ಲಂ ಭರತ್ ನನ್ನು ಬಂಧಿಸಿದ್ದರೂ ಆತ ತಪ್ಪಿಸಿಕೊಂಡು ಪರಾರಿಯಾಗಿದ್ದ. ಬಳಿಕ ಆತನನ್ನು ಹೊರ ರಾಜ್ಯದಲ್ಲಿ   ಮತ್ತೆ ಬಂಧಿಸಿ ಕರೆ ತರುವ ಸಂದರ್ಭದಲ್ಲಿ ಆತನ ಸಹಚರರು ಪೊಲೀಸರ ಮೇಲೆ ದಾಳಿ ನಡೆಸಿದರು ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ  ಹೆಸರ ಘಟ್ಟದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ  ಸ್ಲಂ ಭರತ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.  16ನೇ ವಯಸ್ಸಿಗೆ  ಅಪರಾಧ ಜಗತ್ತಿಗೆ ಕಾಲಿರಿಸಿದ್ದ  ಭರತ್ ಬಳಿಕ ಕುಖ್ಯಾತ ರೌಡಿಯಾಗಿ ಗುರುತಿಸಿಕೊಂಡಿದ್ದ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!