Wednesday, November 30, 2022

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಹತ್ಯೆ

Follow Us

newsics.com
ಕಲಬುರಗಿ: ಇಂಜಿನಿಯರಿಂಗ್ ವಿದ್ಯಾರ್ಥಿಯ ಕೈಕಟ್ಟಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ಕಲಬುರುಗಿ ನಗರದ ಹೊರವಲಯದಲ್ಲಿ ನಡೆದಿದೆ.
ಶಿವಪುತ್ರಪ್ಪ ಪಗಡೆ (25) ಕೊಲೆಯಾದ ವಿದ್ಯಾರ್ಥಿ.
ನಗರದ ಬೋಧನ ಗ್ರಾಮದ ನಿವಾಸಿಯಾಗಿದ್ದ ಶಿವಪುತ್ರಪ್ಪ, ನಗರದ ಶಹಾಬಜಾರ್​ನಲ್ಲಿ ವಾಸವಾಗಿದ್ದ. ಡಿಪ್ಲೋಮಾ ಮುಗಿಸಿ ಇಂಜಿನಿಯರಿಂಗ್ ವಿದ್ಯಾಭ್ಯಾಸದ ಜತೆಗೆ ನಗರದಲ್ಲಿ ಕೆಲಸ ಮಾಡಿಕೊಂಡಿದ್ದ. ಶನಿವಾರ (ಜೂ.19) ದುಷ್ಕರ್ಮಿಗಳು ಸೈಯದ್ ಚಿಂಚೋಳಿ ಮುಖ್ಯರಸ್ತೆ ಬಳಿಯ ಜಮೀನೊಂದರಲ್ಲಿ ಆತನ ಕೈಗೆ ಹಗ್ಗ ಕಟ್ಟಿ ಮುಖದ ಮೇಲೆ ಕಲ್ಲುಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಕೊಲೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.
ಸ್ಥಳೀಯ ದಾರಿಹೋಕರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

 

ನಾಳೆ ಅಂತಾರಾಷ್ಟ್ರೀಯ ಯೋಗ ದಿನ: ಬೆಳಗ್ಗೆ ಮೋದಿ ಭಾಷಣ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!