Saturday, April 17, 2021

ಮಲೆ ಮಹದೇಶ್ವರ ದೇವಸ್ಥಾನಕ್ಕೆ ಇಂದಿನಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಚಾಮರಾಜನಗರ: ರಾಜ್ಯದ ಪ್ರಸಿದ್ದ ದೇವಸ್ಥಾನ ಮಲೆ ಮಹದೇಶ್ವರನ ಸನ್ನಿಧಿಗೆ ಭಕ್ತರ ಪ್ರವೇಶವನ್ನು ಮೂರು ದಿನಗಳ ಕಾಲ ನಿರ್ಬಂಧಿಸಲಾಗಿದೆ. ಜೂನ್ 19ರಿಂದ 21ರ ತನಕ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಚಾಮರಾಜನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಭೇಟಿ ನೀಡಲಿರುವ ಸಾಧ್ಯತೆ ಪರಿಗಣಿಸಿ ಈ ತೀರ್ಮಾನಕ್ಕೆ ಬರಲಾಗಿದೆ. ಸುಮಾರು 50000 ಭಕ್ತರು ದೇವಸ್ಥಾನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಇಷ್ಟು ಸಂಖ್ಯೆಯ ಭಕ್ತರು ಬಂದರೆ ಸಾಮಾಜಿಕ ಅಂತರ ಖಾತರಿಪಡಿಸುವುದು ಅಸಾಧ್ಯವಾಗಲಿದೆ ಎಂಬುದು ಜಿಲ್ಲಾಡಳಿತದ ವಾದ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!