ಚಿತ್ರದುರ್ಗ: ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಮಾಜವಾದಿ ನಾಯಕ, ಮಾಜಿ ಸಚಿವ ಜನತಾ ಪರಿವಾರದ ಡಿ.ಮಂಜುನಾಥ್ ಸೋಮವಾರ ಮಧ್ಯಾಹ್ನ 3:30ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾಲ್ಕೈದು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಹಿರಿಯೂರಿನ ತೋಟದ ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದರು.
ಮಂಜುನಾಥ ಅವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ. ಚಳ್ಳಕೆರೆ ತಾಲೂಕು ಜಾಜೂರು ಗ್ರಾಮದ ಡಿ.ಮಂಜುನಾಥ್ ಅವರು ಹಿರಿಯೂರು ಕ್ಷೇತ್ರದಲ್ಲಿ ಶಾಸಕರಾಗಿ, ಮಂತ್ರಿಯಾಗಿದ್ದರು. ಹಿರಿಯೂರಲ್ಲಿ ಮಂಗಳವಾರ ಅಂತ್ಯಕ್ರಿಯೆ ಜರುಗಲಿದೆ ಎಂದು ಮೃತರ ಪುತ್ರ, ಜಿಪಂ ಮಾಜಿ ಸದಸ್ಯ ಜಗದೀಶ್ ತಿಳಿಸಿದ್ದಾರೆ.
ಮಾಜಿ ಸಚಿವ ಡಿ. ಮಂಜುನಾಥ್ ಇನ್ನಿಲ್ಲ
Follow Us