Thursday, December 8, 2022

ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಹೃದಯಾಘಾತ: ಮಾಜಿ ಶಾಸಕ ಶ್ರೀ ಶೈಲಪ್ಪ ನಿಧನ

Follow Us

newsics.com

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ದುರಂತವೊಂದು ಸಂಭವಿಸಿದೆ. ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಶ್ರೀ ಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಭೆ ಆರಂಭವಾಗುವ ಮೊದಲೇ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು.

ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಶ್ರೀ ಶೈಲಪ್ಪ ಅವರು ನಿಧನರಾದರು.

ಗದಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆಯನ್ನು ಅವರು ಹೊಂದಿದ್ದರು. ಮಾಜಿ ಶಾಸಕ ಶ್ರೀ ಶೈಲಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆಯನ್ನು ರದ್ದುಪಡಿಸಲಾಗಿದೆ.

2019ರಲ್ಲಿ ಬಿಜೆಪಿ ತೊರೆದು ಶ್ರೀ ಶೈಲಪ್ಪ ಅವರು ಕಾಂಗ್ರೆಸ್ ಸೇರಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!