Thursday, December 9, 2021

IT, BT ಕಂಪನಿಗಳ ಕಚೇರಿ ಆರಂಭಕ್ಕೆ ಏ.20ರಿಂದ ವಿನಾಯಿತಿ

Follow Us

ಬೆಂಗಳೂರು: ಏಪ್ರಿಲ್ 20ರಿಂದ ನಿರ್ಬಂಧ, ನಿಯಮಗಳನ್ನು ಪಾಲಿಸಿಕೊಂಡು ರಾಜ್ಯದ ಐಟಿ ಉದ್ಯಮ ಬಾಗಿಲು ತೆರೆಯಬಹುದು.
ಐಟಿ ಕಂಪನಿಗಳು ಸರ್ಕಾರಿ ವಾಹನ ಇಲ್ಲದಿರುವಾಗ ಖಾಸಗಿ ವಾಹನ ಬಳಸಬಹುದಾಗಿದ್ದು, 50 ಸೀಟುಗಳ ಬಸ್ ಇದ್ದರೆ 20 ಮಂದಿ ಮಾತ್ರ ಒಮ್ಮೆಗೆ ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ ತಿಳಿಸಿದರು.
ಶೇ.50ರಷ್ಟು ಅಗತ್ಯ ಸೇವೆಯ ಸಿಬ್ಬಂದಿ ಮಾತ್ರ ಕಚೇರಿಗೆ ತೆರಳಲು ಅನುಮತಿ ಸಿಗಲಿದೆ. ಬೈಕ್ ಇರುವವರು ಒಂದು ಬೈಕಿನಲ್ಲಿ ಒಬ್ಬರು ಮಾತ್ರ ಸಂಚರಿಸಬಹುದು. ಕಾರಿನಲ್ಲಿ ಇಬ್ಬರು ಮಾತ್ರ ಒಮ್ಮೆಗೆ ಸಂಚರಿಸಲು ಅನುಮತಿ ಸಿಗಲಿದೆ. ಆದರೂ ಉದ್ಯೋಗಿಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ವಿನಾಯಿತಿಯಿಂದ ಸಂಪೂರ್ಣ ಲಾಕ್ಡೌನ್ ಮುಗಿಯುವ ತನಕ ವರ್ಕ್ ಫ್ರಂ ಹೋಂ ಆಯ್ಕೆಯೇ ಸೂಕ್ತ ಎನಿಸುತ್ತದೆ.
ಲಾಕ್‌ಡೌನ್ ವಿಸ್ತರಣೆ ಹಿನ್ನೆಲೆಯಲ್ಲಿ ಐಟಿ ಉದ್ಯಮದ ಕಷ್ಟ ನಷ್ಟಗಳ ಬಗ್ಗೆ ಶುಕ್ರವಾರ ಎಂಎಸ್ ಬಿಲ್ಡಿಂಗ್‌ನಲ್ಲಿ ಡಿಸಿಎಂ ಅಶ್ವಥ್ ನಾರಾಯಣ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಕಾನ್ಫರೆನ್ಸ್ ನಲ್ಲಿ IT, BT ಕಂಪನಿಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!