newsics.com
ಮೈಸೂರು: ಆಟವಾಡಲು ತೆರಳಿದ್ದ ಮೂವರು ಪುಟ್ಟ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದು ಜಲಸಮಾಧಿಯಾಗಿದ್ದಾರೆ.
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಈ ದುರಂತ ಸಂಭವಿಸಿದೆ. ಕಾವೇರಿ (2) ರೋಹಿತ್ (3) ಸಂಜಯ್ (4) ಎಂದು ಗುರುತಿಸಲಾಗಿದೆ. ಮಕ್ಕಳು ಆಟವಾಡಲು ತೆರಳಿದ್ದಾಗ ಕೃಷಿ ಹೊಂಡಕ್ಕೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದ ಪಟೇಲ್ ವೆಂಕಟೇಶ್ ಎಂಬುವರಿಗೆ ಸೇರಿದ ಕೃಷಿ ಹೊಂಡಕ್ಕೆ ಈ ಮಕ್ಕಳು ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಜಲಸಮಾಧಿ
Follow Us