ಹುಬ್ಬಳ್ಳಿ: ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಉತ್ತರ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ರೈತ ಮುಖಂಡರು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.
ಇದೇ ವೇಳೆ ನಗರದಲ್ಲಿ ಜನ ಜೀವನ ನಿಧಾನವಾಗಿ ಸಹಜಸ್ಥಿತಿಗೆ ಮರಳುತ್ತಿದೆ. ಸಾರ್ವಜನಿಕರು ಬಸ್ಸು ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಿಧಾನವಾಗಿ ಜನ ಜೀವನ ಚಟುವಟಿಕೆಯತ್ತ ಹೊರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ.