Wednesday, July 6, 2022

ಮೂವರು ಮಕ್ಕಳನ್ನು‌ ಕೊಂದು ಪತ್ನಿಯನ್ನೂ ಬಾವಿಗೆ ತಳ್ಳಿ ಆತ್ಮಹತ್ಯೆ ಯತ್ನ, ತಂದೆ- ತಾಯಿ ಬಚಾವ್

Follow Us

newsics.com

ಮಂಗಳೂರು: ತನ್ನ ಮೂವರು‌ ಮಕ್ಕಳನ್ನು ಬಾವಿ ತಳ್ಳಿ ಕೊಂದ ತಂದೆ, ಪತ್ನಿಯನ್ನೂ ಬಾವಿಗೆ ತಳ್ಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪದ್ಮನೂರು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಯತ್ನವನ್ನು‌ ಕಂಡ ಗ್ರಾಮಸ್ಥರು ಗಂಡ ಹೆಂಡತಿಯನ್ನು ರಕ್ಷಿಸಿದ್ದಾರೆ. ಆದರೆ, ಆಗಲೇ ಮೂವರು ಮಕ್ಕಳು‌ ಬಾವಿಯಲ್ಲಿ‌ ಮುಳುಗಿ ಮೃತಪಟ್ಟಿದ್ದರು. ಪದ್ಮನೂರು ಗ್ರಾಮದ ನಿವಾಸಿ ವಿಜೇತ್ ಶೆಟ್ಟಿಗಾರ್ ತನ್ನ ಮೂವರು ಮಕ್ಕಳಾದ ರಶ್ಮಿತಾ (14), ಉದಯ್ (11) ಮತ್ತು ದಕ್ಷಿತ್ (4)ರನ್ನು ಬಾವಿಗೆ ತಳ್ಳಿ ಹತ್ಯೆಗೈದಿದ್ದಾನೆ.

ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ತಂದೆ ಬಳಿಕ ಪತ್ನಿಯನ್ನು ಅದೇ ಬಾವಿಗೆ ದೂಡಿ ತಾನೂ ಬಾವಿಗೆ ಹಾರಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಅವರಿಬ್ಬರನ್ನೂ ರಕ್ಷಿಸಿದ್ದಾರೆ.

ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂಬಂಧ ಮುಲ್ಕಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಲ್ಡೀವ್ಸ್‌ನಲ್ಲಿ ನಿರ್ಮಾಣವಾಗುತ್ತಿದೆ ತೇಲುವ ನಗರ!

ಖುಷಿಗೆ ಗುಂಡು ಹಾರಿಸಿದ ವರ; ಸ್ನೇಹಿತ ಸಾವು

ಟಾನ್ಸಿಲ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ರೇಸಿ ಕೊರಿಯಾ ನಿಧನ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!