Thursday, June 17, 2021

ಎರಡೇ ವಾರದಲ್ಲಿ ಕೊರೋನಾಗೆ ತಂದೆ-ತಾಯಿ ಬಲಿ: ತಬ್ಬಲಿಯಾಯ್ತು ಐದು ದಿನದ ಹಸುಗೂಸು

newsics.com
ಮಂಡ್ಯ: ಕೇವಲ ಎರಡೇ ವಾರದ ಅಂತರದಲ್ಲಿ ಐದು ದಿನದ ಹಸುಗೂಸು ತನ್ಬ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿ ಗ್ರಾಮದ ನಿವಾಸಿ ನಂಜುಂಡೇಗೌಡ (45) ಮತ್ತು ಮಮತಾ (31) ಮೃತ ದಂಪತಿ.
ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ನಂಜುಂಡೇಗೌಡ ಏಪ್ರಿಲ್‍ ನಲ್ಲಿ ಕೊರೋನಾ ಸೋಂಕಿನಿಂದಾಗಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಏಪ್ರಿಲ್‍ 30 ರಂದು ಚಿಕಿತ್ಸೆ ಫಲಕಾರಿಯಾಗದೆ ನಂಜುಂಡೇಗೌಡ ಮೃತಪಟ್ಟಿದ್ದರು.
ತುಂಬು ಗರ್ಭಿಣಿಯಾಗಿದ್ದ ಪತ್ನಿ ಮಮತಾಗೂ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಹೋಂ ಐಶೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಉಸಿರಾಟದ ಸಮಸ್ಯೆ ಹೆಚ್ಚಾದ್ದರಿಂದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೇ 11ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಮತಾ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರು.
ಮದುವೆಯಾದ 9 ವರ್ಷದ ನಂತರ ಮಗು ಜನಿಸಿದ ಸಂಭ್ರಮ ಹಂಚಿಕೊಳ್ಳಲು ಹೆತ್ತವರೇ ಇಲ್ಲ. ಮತ್ತೊಂದೆಡೆ ಕ್ರೂರಿ ಕೊರೋನಾಗೆ ತಂದೆ, ತಾಯಿ ಪ್ರೀತಿಯಿಂದ ವಂಚಿತವಾದ ಮಗು ತಬ್ಬಲಿಯಾಗಿದೆ.

ನಮಗೆ ಮಕ್ಕಳು ಬೇಕು, ಲಸಿಕೆ ಬೇಡವೇ ಬೇಡ: ಅಮೆರಿಕನ್ನರ ಆತಂಕಕ್ಕೆ ಜೋ ಬೈಡನ್ ಸರ್ಕಾರ ಕಂಗಾಲು

ಕೋವಿಡ್ ಆಸ್ಪತ್ರೆ ನೆಲ‌ ಒರೆಸಿದ ಕೊರೋನಾ ಸೋಂಕಿತ ಸಚಿವ!

ಮತ್ತಷ್ಟು ಸುದ್ದಿಗಳು

Latest News

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

newsics.com ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್ ಏಳರಂದು...

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

newsics.com ಬೆಂಗಳೂರು: ರಾಜ್ಯ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದ್ದು, ಈ...

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

newsics.com ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ. ಈ ಮಧ್ಯೆ  ಅರುಣ್...
- Advertisement -
error: Content is protected !!