newsics.com
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ (ಜ.24) ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು ಕೆ ಪಿ ಎಸ್ಸಿ ಕಾರ್ಯದರ್ಶಿ ಸತ್ಯವತಿ ಮಾಹಿತಿ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಗಮನಕ್ಕೆ ಬಂದಿರುವುದರಿಂದ ಜ. 24 ರಂದು ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ದಿನಾಂಕವನ್ನು ಮರು ನಿಗದಿಪಡಿಸಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.