Tuesday, October 4, 2022

ರಾಜ್ಯ ಸರ್ಕಾರದಿಂದ ಮೀನೂಟದ ಮನೆ!

Follow Us

ಬೆಂಗಳೂರು: ಮೀನು ಪ್ರಿಯರಿಗೆ ಬಂಪರ್ ಕೊಡುಗೆ ನೀಡಲು ಸರ್ಕಾರ ಮುಂದಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಮೀನು ಊಟದ ಮನೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ.

ಇದೇ ರೀತಿ ಕೆ.ಆರ್.ಎಸ್.ಆಲಮಟ್ಟಿ, ಲಿಂಗನಮಕ್ಕಿ, ಭದ್ರಾ ಸೇರಿದಂತೆ ರಾಜ್ಯದ ಹನ್ನೆರಡು ಪ್ರಮುಖ ಜಲಾಶಯಗಳಲ್ಲಿ ಗರಿಷ್ಟ ಪ್ರಮಾಣದ ಮೀನು ಉತ್ಪಾದನೆ ಮಾಡಲು ತೀರ್ಮಾನಿಸಿದೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಎಸ್.ಅಂಗಾರ, ರಾಜ್ಯದಲ್ಲಿ ಮತ್ಸ್ಯ ಕ್ರಾಂತಿ ನಡೆಯಲಿದ್ದು ಇದಕ್ಕೆ ಬೇಕಾದ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಮೀನುಗಾರಿಕಾ ಇಲಾಖೆಯ ವತಿಯಿಂದ ಬೆಂಗಳೂರು ಸೇರಿದಂತೆ ಕೆಲವು ಕಡೆ ಮೀನಿನ ಊಟದ ಹೋಟೆಲ್‌ಗಳನ್ನು ಈ ಹಿಂದೆ ಸ್ಥಾಪಿಸಲಾಗಿತ್ತಾದರೂ ಹಣಕಾಸಿನ ಕೊರತೆಯ ಹಿನ್ನೆಲೆಯಲ್ಲಿ ವಿಸ್ತರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಖಾಸಗಿ ಸಹಭಾಗಿತ್ವದಡಿ ಮೀನುಗಾರಿಕೆ ಇಲಾಖೆ ರಾಜ್ಯದ ಎಲ್ಲೆಡೆ ಮೀನು ಊಟದ ಮನೆಗಳನ್ನು ಪ್ರಾರಂಭಿಸಲಿದೆ ಎಂದರು.

ಆರಂಭಿಕ ಹಂತದಲ್ಲಿ ಬೆಂಗಳೂರಿನ ಐದು ಕಡೆ ಮೀನುಗಾರಿಕಾ ಇಲಾಖೆಯೇ ಹೊಸ ಮೀನಿನ ಊಟದ ಹೋಟೆಲ್‌ಗಳನ್ನು ಪ್ರಾರಂಭಿಸಲು ತೀರ್ಮಾನಿಸಿದ್ದು, ಇದಕ್ಕೆ ಕೆರೆಗಳಿರುವ ಕಡೆ ಬಿಡಿಎ ಜಾಗ ಒದಗಿಸಲು ಒಪ್ಪಿದೆ ಎಂದು ಹೇಳಿದರು.

ಹೆಂಡತಿಯ ಶೀಲ ಶಂಕಿಸಿ ಕೊಡಲಿಯಿಂದ ಕೊಚ್ಚಿ ಕೊಂದ!!

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!