ಕಾರವಾರ: ಪ್ರತಿಷ್ಟಿತ ಕಾರವಾರ ಬಂದರು ವಿಸ್ತರಣೆ ಯೋಜನೆಗೆ ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಂದರು ವಿಸ್ತರಣೆಯಿಂದಾಗಿ ರವೀಂದ್ರ ನಾಥ್ ಟಾಗೋರ್ ಕಡಲ ತೀರದಲ್ಲಿ ಮೀನುಗಾರಿಕಾ ಚಟುವಟಿಕೆಗಳಿಗೆ ಅಡ್ಡಿಯಾಗಲಿದೆ. ಮೀನಿನ ಬಲೆ ಒಣಗಿಸಲು ಮತ್ತು ಇನ್ನಿತರ ಕೆಲಸಗಳಿಗೆ ಅವಕಾಶ ಲಭಿಸದು ಎಂಬ ಆತಂಕವನ್ನು ಮೀನುಗಾರರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಂದು ಕಾರವಾರ ಬಂದ್ ಗೆ ಹಲವು ಸಂಘಟನೆಗಳು ಕರೆ ನೀಡಿದ್ದು, ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.