Wednesday, November 30, 2022

ಪಶ್ಚಿಮ ಘಟ್ಟದಲ್ಲಿ ಮಳೆಯ ಅಬ್ಬರ: ಬೆಳಗಾವಿ, ಬಾಗಲಕೋಟೆಯಲ್ಲಿ ಪ್ರವಾಹ

Follow Us

newsics.com

ಬೆಳಗಾವಿ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಹರಿದು ಬರುತ್ತಿರುವ ನದಿಗಳಲ್ಲಿ ನೀರಿನ ಪ್ರಮಾಣ ಭಾರೀ ಹೆಚ್ಚಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಹರಿಯುತ್ತಿರುವ ಎಲ್ಲ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಕೃಷ್ಣಾ, ವೇದ್ ಗಂಗಾ, ದೂದ್ ಗಂಗಾ, ಘಟಪ್ರಭಾ, ಹಿರಣ್ಯ ಕೇಶಿ, ಮಾರ್ಕಂಡೇಯ ಮತ್ತು ಮಲಪ್ರಭಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಬೆಳಗಾವಿಯಲ್ಲಿ ಪ್ರವಾಹದಿಂದ ಇಬ್ಬರು ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ 188 ಗ್ರಾಮಗಳು ಪ್ರವಾಹದಿಂದ ತೊಂದರೆಗೆ ಸಿಲುಕಿದೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ಇದೇ ವೇಳೆ ಮಲೆನಾಡಿನಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ.  ಚಿಕ್ಕಮಗಳೂರಿನಲ್ಲಿ ತುಂಗಾ, ಭದ್ರಾ ಮತ್ತು ಹೇಮಾವತಿ ನದಿ ತುಂಬಿ ಹರಿಯುತ್ತಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ತೀರ್ಥ ಹಳ್ಳಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಕದ್ರಾ ಅಣೆಕಟ್ಟು ಭರ್ತಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!