newsics.com
ಬೆಂಗಳೂರು: ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಷ್ಟ್ರಪತಿ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ವಾಗತಿಸಿದರು.
ರಾಷ್ಟ್ರಪತಿ ಅವರು ಚಾಮರಾಜನಗರದಲ್ಲಿ ವೈದ್ಯಕೀಯ ಕಾಲೇಜಿನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಶೃಂಗೇರಿ ಮಠಕ್ಕೆ ಭೇಟಿ ನೀಡಿ ತಾಯಿ ಶಾರದೆಯ ದರ್ಶನ ಪಡೆಯಲಿದ್ದಾರೆ.
ಮಂಗಳೂರಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಜ್ಯ ಪ್ರವಾಸ ಕೊನೆಗೊಳಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳೂರಿನಿಂದ ನೇರವಾಗಿ ದೆಹಲಿಗೆ ತೆರಳಲಿದ್ದಾರೆ.