Tuesday, April 13, 2021

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಓ ಮಯ್ಯ ಆತ್ಮಹತ್ಯೆ

ಬೆಂಗಳೂರು: ನಗರದ ಬಸವನಗುಡಿಯ ನೆಟ್ಟಕಲ್ಲಪ್ಪ ವೃತ್ತದಲ್ಲಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನ ಮಾಜಿ ಸಿಇಓ ವಾಸುದೇವ ಮಯ್ಯ (64) ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ ಕಾರಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ನಲ್ಲಿ ನಡೆದಿದ್ದ ಹಣಕಾಸಿನ ಅವ್ಯವಹಾರ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ತಿಳಿಸಿದ್ದಾರೆ. ಹಣಕಾಸಿನ ಅವ್ಯವಹಾರದಲ್ಲಿ ಮಯ್ಯ ಕೂಡ ಆರೋಪಿಯಾಗಿದ್ದರು. ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಮಣೂರು ವಾಸುದೇವ ಮಯ್ಯ ವಿರುದ್ಧ ಬಹುಕೋಟಿ (1400 ಕೋಟಿ) ವಂಚನೆ ಆರೋಪದಡಿ ಜೂ.18ರಂದು ದೂರು ದಾಖಲಾಗಿತ್ತು. ಶ್ರೀ ಗುರು ರಾಘವೇಂದ್ರ ಬ್ಯಾಂಕ್‌ನ ಸಿಇಓ ಸಂತೋಷ್ ಕುಮಾರ್, ಕೋಟ್ಯಂತರ ರೂಪಾಯಿ ಅವ್ಯವಹಾರ ಮಾಡಿರುವ ಆರೋಪದ ಮೇಲೆ ವಾಸುದೇವ ಮಯ್ಯ ವಿರುದ್ಧ ದೂರು ನೀಡಿದ್ದರು. ವಾಸುದೇವ ಮಯ್ಯ 2012ರಿಂದ 2018 ರವರೆಗೆ ಬ್ಯಾಂಕ್​ನ ಸಂಪೂರ್ಣ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಈ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ವಾಸುದೇವ್ ಮಯ್ಯ ಅವರ ಮೇಲಿತ್ತು. ವಾಸುದೇವ್​ ಮಯ್ಯ ಹಾಗೂ ಬ್ಯಾಂಕ್​ ಅಧ್ಯಕ್ಷ ರಾಮಕೃಷ್ಣ ಅವರ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿತ್ತು. ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್​ ಸೊಸೈಟಿಯ ಅವ್ಯವಹಾರದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಇತ್ತ ಎಸಿಬಿಯೂ ತನಿಖೆ ನಡೆಸುತ್ತಿದೆ. ಸಹಕಾರ ಬ್ಯಾಂಕ್​ನ ಅವ್ಯವಹಾರದಲ್ಲಿ ಸಿಇಒ ವಾಸುದೇವ ಮಯ್ಯ ಮತ್ತು ಅಧ್ಯಕ್ಷ ರಾಮಕೃಷ್ಣ ಅವರ ಹೆಸರು ಬಲವಾಗಿ ಕೇಳಿಬಂದಿತ್ತು. ಬಿಲ್ಡರ್​​ಗಳಿಗೆ ನೂರಾರು ಕೋಟಿ ರೂಪಾಯಿ ಸಾಲ ನೀಡಿ ಅವ್ಯವಹಾರ ಮಾಡಿದ್ದರು. ಅದಕ್ಕಾಗಿ ಅವರು ಪಡೆದ ದಾಖಲೆಗಳೆಲ್ಲ ಬೋಗಸ್​ ಆಗಿದ್ದವು. ಬ್ಯಾಂಕ್​ ಸಿಬ್ಬಂದಿ ಹೆಸರಲ್ಲಿ ನಕಲಿ ಅಕೌಂಟ್ ತೆರೆದು ನೂರಾರು ಕೋಟಿ ರೂಪಾಯಿ ಟ್ರಾನ್ಸ್​ಫರ್​ ಮಾಡಿದ್ದು, ಎಸಿಬಿ ದಾಳಿ ವೇಳೆ ಗೊತ್ತಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!