newsics.com
ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ಅಸಮಾಧಾನ ಬಗೆಹರಿಸಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಧ್ಯಸ್ಥಿಕೆ ವಹಿಸಿದ್ದಾರೆ. ಆಪ್ತರಾದ ಸಿಎಂ ಬೊಮ್ಮಾಯಿ ಪರ ನಿಂತಿದ್ದು, ಕೇಳಿದ ಸಚಿವ ಸ್ಥಾನ ಸಿಗದ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಯಡಿಯೂರಪ್ಪ ಅವರು ಈಗಾಗಲೇ ಶ್ರೀರಾಮುಲು, ಎಂಟಿಬಿ ನಾಗರಾಜ್ ಅವರುಗಳ ಅಸಮಾಧಾನ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದ್ದು, ಆನಂದ್ ಸಿಂಗ್ ಕೂಡ ಬಿಎಸ್ವೈ ಅವರನ್ನು ಭೇಟಿಯಾಗಿದ್ದು, ಬಹುತೇಕ ರಾಜೀನಾಮೆ ನಿರ್ಧಾರ ಕೈಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಸಿಎಂ ಬೊಮ್ಮಾಯಿ ಕೂಡ ಆರಂಭಿಕ ಸಮಸ್ಯೆಯಿಂದ ಪಾರಾಗಿದ್ದಾರೆ.
ಮಾಜಿ ಸಿಎಂ ಬಿಎಸ್ವೈ ಭೇಟಿ ಮಾಡಿದ ಸಚಿವರಿಗೆ ಬುದ್ದಿವಾದ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಮಾತುಕತೆಗೆ ಒಪ್ಪಿಕೊಳ್ಳದಿದ್ದಲ್ಲಿ ನಂತರ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.