ಮಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಮೂಡಬಿದಿರೆಯ ಅಮರನಾಥ ಶೆಟ್ಟಿ (80) ಸೋಮವಾರ ಮುಂಜಾನೆ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಎರಡು ವಾರಗಳ ಹಿಂದೆ ನಗರದ ಎ.ಜೆ. ಆಸ್ಪತ್ರೆಗೆ ದಾಖಲಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.
ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದ ಅವರು 2016ರಲ್ಲಿ ರಾಜಕೀಯದಿಂದ ನಿವೃತ್ತರಾಗಿದ್ದರು. ಅಮರನಾಥ ಶೆಟ್ಟಿ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನ
Follow Us