Tuesday, August 9, 2022

ಮಾಜಿ ಸಚಿವ ವಿನಯ್ ಕುಲಕರ್ಣಿ 3 ದಿನ ಸಿಬಿಐ ಕಸ್ಟಡಿಗೆ

Follow Us

newsics.com 
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ವಿನಯ್ ಕುಲಕರ್ಣಿಯವರನ್ನು ಮೂರು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿ ಧಾರವಾಡದ 32ನೇ ಸೆಷನ್ಸ್​ ಕೋರ್ಟ್ ಆದೇಶ ಹೊರಡಿಸಿದೆ. ಗುರುವಾರ ಬೆಳಗ್ಗೆ ಸಿಬಿಐ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರನ್ನು ವಶಕ್ಕೆ ಪಡೆದಿತ್ತು. ಸಂಜೆ ವೇಳೆಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆ ವೇಳೆ ವಿಚಾರಣೆ ನಡೆಸಿದ್ದ ಕೋರ್ಟ್ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿತ್ತು.
ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ಮತ್ತೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಷ್ಟೇ ಅಲ್ಲದೆ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಮೂರು ದಿನಗಳ ಕಾಲ ವಿನಯ್ ಕುಲಕರ್ಣಿಯವರನ್ನು ಕಸ್ಟಡಿಗೆ ನೀಡಿ ಆದೇಶಿಸಿದೆ.

ದೆಹಲಿ ವಾಯುಮಾಲಿನ್ಯ ತಡೆಗೆ ಕೇಂದ್ರಕ್ಕೆ ಸುಪ್ರೀಂ ಆದೇಶ

ಸಿಎಂ ಬೆಂಗಾವಲು ವಾಹನ ಪಲ್ಟಿ

ಮದುವೆಯಾಗುವ ತವಕ; ಹುಡುಗಿಗಾಗಿ ಫ್ಲೆಕ್ಸ್ ಮೊರೆಹೋದ ಯುವಕ!

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!